Category: ದೇಶ

ತೆಲಂಗಾಣದಲ್ಲಿ ಸುರಂಗ ಕುಸಿತ; 7 ಕಾರ್ಮಿಕರು ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

ಹೈದರಾಬಾದ್ : ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ನಾಗರ್‌ಕರ್ನೂಲ್ ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ…

ಮಾ.11 ರಿಂದ ಪ್ರಧಾನಿ ಮೋದಿ ಮಾರಿಷಸ್ ಪ್ರವಾಸ

ನವದೆಹಲಿ : ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ತಿಳಿಸಿದ್ದಾರೆ. ಶುಕ್ರವಾರ ಸದನವನ್ನುದ್ದೇಶಿಸಿ ಮಾತನಾಡಿದ ನವೀನ್…

ಮೋದಿ ಭರವಸೆ ನಂಬಿ ಮಹಿಳೆಯರು ಮೋಸ ಹೋಗಿದ್ದಾರೆ; ಸಿಎಂಗೆ ಅತಿಶಿ ಪತ್ರ

ನವದೆಹಲಿ : ಮಹಿಳೆಯರಿಗೆ ತಿಂಗಳಿಗೆ 2,500 ರೂ. ಹಣ ನೀಡುವ ಗ್ಯಾರಂಟಿ ಯೋಜನೆ ಕುರಿತು ಚರ್ಚಿಸಲು ಸಮಯ ನೀಡುವಂತೆ ಕೋರಿ ನೂತನ ಸಿಎಂ ರೇಖಾ ಗುಪ್ತಾ ಅವರಿಗೆ ಮಾಜಿ ಸಿಎಂ ಅತಿಶಿ ಪತ್ರ ಬರೆದಿದ್ದಾರೆ. ಅಲ್ಲದೇ ಬಿಜೆಪಿ ನೇತೃತ್ವದ ಸರ್ಕಾರ ತನ್ನ…

ಮಹಾ ಕುಂಭಮೇಳಕ್ಕೆ ತೆರಳಿದ್ದ ಒಂದೇ ಕುಟುಂಬದ ಜನರು ರಸ್ತೆ ಅಪಘಾತದಲ್ಲಿ ಸಾವು

ಲಕ್ನೋ : ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ…

ಸೌರವ್‌ ಗಂಗೂಲಿ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಕೋಲ್ಕತ್ತಾ : ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾದ ಘಟನೆ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಸೌರವ್‌ ಗಂಗೂಲಿ ಬರ್ಧಮಾನ್‌ಗೆ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಗಂಗೂಲಿ ಅವರ ರೇಂಜ್ ರೋವರ್ ಕಾರು…

ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ

ಮುಂಬೈ : ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು…

ಬಿಜೆಪಿ ನೇತೃತ್ವದಲ್ಲಿ ದೆಹಲಿ ಸರ್ಕಾರದ ಮೊದಲ ಸಂಪುಟ ಸಭೆ…!

ದೆಹಲಿ : ದೆಹಲಿಯಲ್ಲಿ ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನೆನ್ನೆ ಸಂಜೆ ನಡೆದಿದೆ. ಭಾರತೀಯ ಜನತಾ ಪಕ್ಷದ ನೇತೃತ್ವದ ದೆಹಲಿ ಸಚಿವ ಸಂಪುಟ ತನ್ನ ಮೊದಲ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕೆ…

ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ

ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ್, ಕಪಿಲ್ ಮಿಶ್ರಾ, ಆಶಿಶ್ ಸೂದ್ ಮತ್ತು…

ದೆಹಲಿ ವಿಧಾನಸಭೆಯಿಂದ ಹೊರಹಾಕಲ್ಪಟ್ಟಿದ್ದ, ವಿಜೇಂದ್ರ ಗುಪ್ತಾ ಈಗ ಸ್ಪೀಕರ್‌

ದೆಹಲಿ : ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಳ್ವಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕ ವಿಜೇಂದ್ರ ಗುಪ್ತಾ ಅವರನ್ನು ವಿಧಾನಸಭೆಯಿಂದ ಹೊರಹಾಕಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು, 27 ವರ್ಷಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಗುಪ್ತಾ ಅವರನ್ನು ಸ್ಪೀಕರ್​ ಆಗಿ ಆಯ್ಕೆ…

ಪಂಜಾಬ್​ನಲ್ಲಿ 52 ಪೊಲೀಸ್ ಅಧಿಕಾರಿಗಳ ವಜಾ…!

ಪಂಜಾಬ್ : ಪಂಜಾಬ್ ಪೊಲೀಸ್ ಇಲಾಖೆಯೊಳಗಿನ ಭ್ರಷ್ಟಾಚಾರದ ವಿರುದ್ಧ ಪ್ರಮುಖ ಕ್ರಮದಲ್ಲಿ ಸಿಎಂ ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರವು ದುಷ್ಕೃತ್ಯದ ಆರೋಪದ ಮೇಲೆ 52 ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಈ ಅಕ್ರಮಗಳ ಆರೋಪದ ಮೇಲೆ…