ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.‌ ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರ ಕಾರ್ಯಕ್ರಮದಲ್ಲಿ, ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ ಟ್ರಸ್ಟ್ ಮಾಡಲಾಗಿತ್ತು. ಆ ಟ್ರಸ್ಟ್ ಯಾವುದೇ ವ್ಯವಹಾರ ಮಾಡುವಂಥದ್ದಲ್ಲ. ಅಥವಾ ಕೈಗಾರಿಕೆ ಮಾಡುವಂಥದ್ದಲ್ಲ. ಅದೊಂದು ಧಾರ್ಮಿಕ ಸಂಸ್ಥೆ.‌

ಈ ಟ್ರಸ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಖರ್ಗೆ, ರಾಧಾಕೃಷ್ಣ, ಪ್ರಿಯಾಂಕ್ ಖರ್ಗೆ ಅವರೂ ಸೇರಿ ಅವರ ಮನೆಯವರೇ 7 ಜನ ಟ್ರಸ್ಟಿಗಳಾಗಿದ್ದಾರೆ.

ಈ ಟ್ರಸ್ಟಿಗೆ ಒಂದು ಎಕರೆಗೆ 5 ಕೋಟಿ ಬೆಲೆಬಾಳುವ ಕೆಐಎಡಿಬಿಯ ಇಂಡಸ್ಟ್ರಿಯಲ್ ಲೇ ಔಟ್‍ನಲ್ಲಿ 5 ಎಕರೆ ಜಾಗವನ್ನು ಪಡೆದುಕೊಂಡಿದ್ದಾರೆ. ಈ ಜಾಗಕ್ಕೆ ಹೊರಗಡೆ ಪ್ರತಿ ಎಕರೆಗೆ 10ರಿಂದ 15 ಕೋಟಿ ಬೆಲೆ ಯಾಗಲಿದೆ.‌ ಖರ್ಗೆ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿರುವದ ಹೊಣೆಹೊತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ‌

Leave a Reply

Your email address will not be published. Required fields are marked *