ಛತ್ತೀಸ್‌ಗಢ : ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಕಬ್ಬಿಣ ತಯಾರಿಸುವ ನಿರ್ಮಾಣ ಹಂತದ ಸ್ಥಾವರದಲ್ಲಿ ಭಾರಿ ಗಾತ್ರದ ಚಿಮಣಿ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಜಿಲ್ಲೆಯ ಸರಗಾಂವ್ ಪ್ರದೇಶದಲ್ಲಿರುವ ಸ್ಥಾವರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಭೋಜ್ರಾಮ್ ಪಟೇಲ್ ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಚಿಮಿಣಿ ಕುಸಿದು ಸ್ಥಳದಲ್ಲಿದ್ದ ಕೆಲವು ಕಾರ್ಮಿಕರು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಗೊಂಡ ಕಾರ್ಮಿಕರನ್ನು ರಕ್ಷಿಸಿ ಬಿಲಾಸ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕುಸಿದ ರಚನೆಯ ಅಡಿಯಲ್ಲಿ ಇನ್ನೂ ಅನೇಕ ಕಾರ್ಮಿಕರು ಸಿಲುಕಿದ್ದಾರೆ. ಅವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *