ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿನ್ನೆ(ಆ. 08) ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ಆವರಣದಲ್ಲಿ ನಡೆದ ಸೇಂಟ್ ಮೇರೀಸ್ ಅವರ ಜನ್ಮದಿನದ ಹಬ್ಬದ ಆಚರಣೆಯನ್ನು ಉದ್ಘಾಟಿಸಿದರು.
ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮಗುರುಗಳಾದ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.