ಬೆಂಗಳೂರು : ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ಹೋಗಿದ್ದರು.
ಆರೋಗ್ಯ ತಪಾಸಣೆ, ಎಂಆರ್‌ಐ ಸ್ಕ್ಯಾನ್ ಮಾಡಲಾಗಿತ್ತು. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರ ಮಾಹಿತಿ ನೀಡಿದ್ದರು. ಇಂದು ಯಾವುದೇ ಸಭೆ, ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿಶ್ರಾಂತಿಯಲ್ಲಿದ್ದು ನಾಳೆ (ಬುಧವಾರ) ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ.