ಕಲಬುರಗಿ : ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ.

ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ.

ಸದ್ಯಕ್ಕೆ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣ ಪಾಟೀಲ್‌ಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *