ಬೆಂಗಳೂರು : ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ನನ್ನ ಮೇಲೆ ಕೊಲೆ ಮತ್ತು ಆಸೀಡ್ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುತ್ತಿದ್ದಾಗ ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದ್ದು, ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ.
ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆಯಿದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದ್ದಾರೆ.