ಬೆಂಗಳೂರು : ಈ ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ.
ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯವಾಗಿದೆ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಹೇಳಿದ್ದಾರೆ.
ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.