ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ.

ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *