ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ ಎಂದು ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು-ಮಿತ್ರರ ದು:ಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ ಎಂದು ಸಿಎಂ ಸಂತಾಪ ಸೂಚಿಸುವ ಮೂಲಕ ಎಕ್ಸ್‌ ಖಾತೆಯಲ್ಲಿ ಫೋಸ್ಟ್‌ ಮಾಡಿದ್ದಾರೆ.

https://youtu.be/Z0gxKLx5FxY

Leave a Reply

Your email address will not be published. Required fields are marked *