ಮುಂಬೈ : ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಬೆನ್ನಲ್ಲೇ ಬಾಲಿವುಡ್‌ ತಾರೆಯರಿಗೆ ಸರಣಿ ಜೀವ ಬೆದರಿಕೆ ಬಂದಿದೆ. ಹಾಸ್ಯನಟ ಕಪಿಲ್ ಶರ್ಮಾ, ನಟ ರಾಜ್‌ಪಾಲ್ ಯಾದವ್, ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕಿ – ಹಾಸ್ಯ ನಟಿ ಸುಗಂಧ ಮಿಶ್ರಾ ಪಾಕಿಸ್ತಾನ ಮೂಲದ ಇ-ಮೇಲ್‌ನಿಂದ ಜೀವ ಬೆದರಿಕೆ ಬಂದಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸೆಲೆಬ್ರಿಟಿಗಳು ನೀಡಿದ ದೂರಿನ ಮೇರೆಗೆ ಮುಂಬೈನ ಅಂಬೋಲಿ ಮತ್ತು ಓಶಿವಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದರೆ.

ಇ-ಮೇಲ್‌ ಬೇದರಿಕೆ ಸಂದೇಶ ಏನಿದೆ? – ನಾವು ನಿಮ್ಮ ಇತ್ತೀಚಿನ ಎಲ್ಲಾ ಚಟುವಟಿಕೆಗಳನ್ನು ಗಮನಿಸುತ್ತಿದ್ದೇವೆ. ಇದು ಪ್ರಚಾರದ ಸ್ಟಂಟ್‌ ಅಲ್ಲ, ನಿಮಗೆ ಕಿರುಕುಳ ನೀಡುವ ಪ್ರಯತ್ನವೂ ಅಲ್ಲ. ಈ ಸಂದೇಶವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ. ನಾವು ಹೇಳಿದಂತೆ ಕೇಳದಿದ್ದರೆ, ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೂ ತೀವ್ರ ಪರಿಣಾಮ ಬೀರಬಹುದು. ಈ 8 ಗಂಟೆಗಳ ಒಳಗೆ ಈ ಸಂದೇಶಕ್ಕೆ ಪ್ರತಿಕ್ರಿಯಿಸಿ ಅಂತ ಇ-ಮೇಲ್‌ನಲ್ಲಿ ಬೆದರಿಕೆ ಬಂದಿದೆ. ಈ ಬೆದರಿಕೆ ಬಂದ ಇಮೇಲ್‌ ವಿಳಾಸ ಪಾಕಿಸ್ತಾನ ಎಂದು ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಮುಂಬೈ ಪೊಲೀಸ್‌ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *