ಆಂಧ್ರಪ್ರದೇಶ : ದರ್ಶನಕ್ಕೆ ಬಂದಿದ್ದ ಭಕ್ತರು ಮೃತಪಟ್ಟಿರುವುದು ದುರದೃಷ್ಟಕರವಾಗಿದ್ದು, ಈ ಘಟನೆಯಿಂದ ತೀವ್ರ ಬೇಸರವಾಗಿದೆ ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.
ಈ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ನೀಡಿ ನೆರವು ನೀಡುವಂತೆ ಟಿಟಿಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಸಿಎಂ ಚಂದ್ರಬಾಬು ನಾಯ್ಡು ತಿರುಪತಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ತಿರುಪತಿ ಕಾಲ್ತುಳಿತಕ್ಕೆ ಕಾರಣವೇನು? – ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಏಕಾಏಕಿ ಧಾವಿಸಿದ್ದರಿಂದ ಕಾಲ್ತುಳಿತ ಉಂಟಾಯಿತು ಎಂದು ವರದಿಯಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.