ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬರೋಬ್ಬರಿ 144 ವರ್ಷಗಳ ನಂತರ ಮಹಾಕುಂಭ ಮೇಳ ನಡೆಯುತ್ತಿದೆ. ಈ ಮೇಳದಲ್ಲಿ ಕೋಟ್ಯಾಂತರ ಜನ ಭಾವಗವಹಿಸಿದ್ದಾರೆ. ಜೀವಮಾನದಲ್ಲಿ ಒಮ್ಮೆ ಮಾತ್ರ ನೋಡಬಹುದಾದ ಅದ್ಭುತ ಹಾಗೂ ಮನೋಹರ ದೃಶ್ಯವಿದು.
ಇಂದು ಮಹಾ ಕುಂಭಮೇಳದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದಾರೆ. ಅವರೊಂದಿಗೆ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಮತ್ತು ಪಕ್ಷದ ಇತರ ನಾಯಕರು ಇದ್ದರು. ಮಹಾಕುಂಭದ 6ನೇ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಚಿವ ರಾಜನಾಥ್ ಸಿಂಗ್ ಸ್ನಾನ ಮಾಡಿದರು.
ಬಳಿಕ, ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಕಳೆದ 6 ದಿನಗಳಲ್ಲಿ ಪ್ರಪಂಚದಾದ್ಯಂತದ 7.3 ಕೋಟಿಗೂ ಹೆಚ್ಚು ಭಕ್ತರು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎನ್ನಲಾಗಿದೆ.