ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದಲ್ಲ ಮತ್ತು ಎಲ್ಲಾ ದೇಶಗಳು ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ.

ಅಕ್ರಮ ವಲಸೆಯನ್ನು ತಡೆಯುವಂತೆಯೂ ಅವರು ಕರೆ ನೀಡಿದರು. ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ, ತಮ್ಮ ಪ್ರಜೆಗಳನ್ನು ವಾಪಸ್ ಕರೆದುಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ತಮ್ಮ ದೇಶದಲ್ಲಿ ಅಕ್ರಮ ವಲಸಿಗರು ಇದ್ದರೆ ವಾಪಸ್​ ಕಳುಹಿಸುತ್ತಾರೆ, ಈ ಪ್ರಕ್ರಿಯೆಯು ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲೂ ಇದೆ, ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ, ಈ ಪ್ರಕ್ರಿಯೆ 2009ರಿಂದಲೂ ಇದೆ ಎಂದು ಹೇಳಿದ್ದಾರೆ.

ಬುಧವಾರ ಅಮೆರಿಕದಿಂದ ಗಡಿಪಾರು ಮಾಡಲಾದ 104 ಭಾರತೀಯ ಅಕ್ರಮ ಭಾರತೀಯ ವಲಸಿಗರ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಜೈಶಂಕರ್ ಅವರು ಈ ಹೇಳಿಕೆಗಳನ್ನು ನೀಡಿದರು. ಗಡಿಪಾರಾದವರು ಮನೆಗೆ ಹಿಂದಿರುಗುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ರಾಜತಾಂತ್ರಿಕರು ಹೇಳಿದರು.

Leave a Reply

Your email address will not be published. Required fields are marked *