ಚೆನ್ನೈ : ರಾಜ್ಯದಲ್ಲಿ ಡಿನ್ನರ್ ಪಾಲಿಟಿಕ್ಸ್ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ.
ತಮಿಳುನಾಡಿನ ಕುಂಬಕೋಣಂಗೆ ಭೇಟಿ ನೀಡಿದ್ದ ಅವರಿಂದು, ಶಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ ದೇವಿ ದರ್ಶನ ಪಡೆದಿದ್ದಾರೆ. ಡಿಕೆಶಿ ಅವರ ಈ ಭೇಟಿಯು ಕುತೂಹಲದೊಂದಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜಕೀಯ ಸಮಸ್ಯೆ ಪರಿಹಾರಕ್ಕಾಗಿ ದೇವಿ ದರ್ಶನ ಪಡೆದರೇ ಎಂಬ ಪ್ರಶ್ನೆಯೂ ಮೂಡಿದೆ.
ಗೃಹ ಸಚಿವ ಪರಮೇಶ್ವರ್ ಆಯೋಜಿಸಿದ್ದ, ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ಬಳಿಕ ಕಾಂಗ್ರೆಸ್ ಭಿನ್ನಮತ ತಾರಕಕ್ಕೆ ಏರಿದೆ. ಡಿನ್ನರ್ ಪಾಲಿಟಿಕ್ಸ್ ಮಾಡಿದ್ದ ಸಿಎಂ ಬಣಕ್ಕೆ, ವಿದೇಶದಿಂದ ವಾಪಸ್ ಆಗುತ್ತಲೇ ಹೈಕಮಾಂಡ್ ಮೂಲಕ ಸೈಲೆಂಟಾಗಿ ಶಾಕ್ ನೀಡುವ ಕೆಲಸವನ್ನು ಡಿಸಿಎಂ ಡಿಕೆ ಶಿವಕುಮಾರ್ ಮಾಡಿದ್ದರು.
ಈಗ ಡಿನ್ನರ್‌ಗೆ ಬ್ರೇಕ್ ಹಾಕಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಬಣ ಕೆರಳಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಜ.13 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವ ಮೂಲಕ ಕುತೂಹ