ಮಂಗಳೂರು : ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು.
ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ ಎಂದು ವರದಿಯಾಗಿದೆ.