ರಾಕಿಂಗ್ ಯಶ್ ಅವರು ಜ.8ರಂದು ಹುಟ್ಟುಹಬ್ಬವಾಗಿದ್ದು, ಈ ದಿನ ತಾವು ಬರ್ತ್‌ಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಎಂದು ನಟ ಪೋಸ್ಟ್ ಮಾಡಿದ್ದಾರೆ. ಈ ಬಾರಿಯೂ ಯಶ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋದಿಲ್ಲ ಅಂತ ಫ್ಯಾನ್ಸ್‌ಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ನಟ ಬರೆದುಕೊಂಡಿದ್ದಾರೆ.
ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಬರೆದುಕೊಂಡಿದ್ದಾರೆ.
ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ.
ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.