ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಇಂದು ಹೈಡ್ರಾಮಾಕ್ಕೆ ಕಾರಣವಾದವು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು.
ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘‘ಹನಿಟ್ರ್ಯಾಪ್ ಸರ್ಕಾರ’’ ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಪ್ರತಿಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಟ್ಟಾದರು.
ಬಜೆಟ್ ಮೇಲಿನ ಚರ್ಚೆಗಳಿಗೆ ಉತ್ತರಿಸುವಾಗ ತಾಳ್ಮೆ ಕಳೆದುಕೊಂಡ ಸಿಎಂ ಸಿದ್ದರಾಮಯ್ಯ – ರಾಜ್ಯಪಾಲರ ಭಾಷಣ ಮತ್ತು ಮಾರ್ಚ್ 7ರಂದು ತಾವು ಮಂಡಿಸಿದ ಬಜೆಟ್ ಮೇಲೆ ನಡೆದ ಚರ್ಚೆಯ ಮೇಲೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದಾಗ ವಿರೋಧ ಪಕ್ಷದ ನಾಯಕರು ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಯಸಿ ಗಲಾಟೆ ಮಾಡಿದರು.
ಒಂದು ಹಂತದಲ್ಲಿ ತಮ್ಮ ತಾಳ್ಮೆಯನ್ನು ಕಳೆದುಕೊಳ್ಳುವ ಸಿದ್ದರಾಮಯ್ಯ ಬಿಜೆಪಿ ಶಾಸಕರನ್ನು ಉದ್ದೇಶಿಸಿ ಏಯ್ ಹೋಗ್ರೀ, ನಿಮ್ಮ ಯಾವ ಪ್ರಶ್ನೆಗೂ ಉತ್ತರ ಕೊಡಲ್ಲ ಅನ್ನುತ್ತಾರೆ. ನೀವು ಹೀಗೆ ಹೇಳಿದರೆ ಹೇಗೆ ಅನ್ನುತ್ತಾ ಬಿಜೆಪಿ ನಾಯಕರು ಕೂಗಾಡುವುದನ್ನು ಮುಂದುವರಿಸುತ್ತಾರೆ.