ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಮಲ್ಲೇಶ್ವರಂ ನ ಕೆಸಿ ಜನರಲ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಈಗ ನಾನು ಏನು ಹೇಳುವುದಿಲ್ಲ. ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿ ದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನು ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಪೊಲೀಸರು ಇಲ್ಲದಿದ್ರೆ ನನ್ನ ಕೊಲೆ ಆಗುತ್ತಿತ್ತು. ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕುಸುಮಾ ಶಾಸಕಿ ಆಗಬೇಕು ಎಂದು ಇತ್ತೀಚಿಗೆ ಕೆಲವರು ಧಮ್ಕಿ ಹಾಕ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ ಎನ್ನಲಾಗಿದೆ.