ನವದೆಹಲಿ : 27 ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ದೆಹಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಇಂದು (ಸೋಮವಾರ ಫೆ.17) ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಉನ್ನತಮಟ್ಟದ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಇಂದು (ಸೋಮವಾರ) ಮಧ್ಯಾಹ್ನ 3 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ದೆಹಲಿ ಪ್ರಧಾನ ಕಚೇರಿಯಲ್ಲಿ ನಿರ್ಣಾಯಕ ಸಭೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ಎಲ್ಲಾ ಶಾಸಕರು ಹಾಗೂ ದೆಹಲಿಯ ಎಲ್ಲಾ 7 ಸಂಸದರೂ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಈ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದು, ಮಂಗಳವಾರ (ಫೆ.18) ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲಾ ಎನ್‌ಡಿಎ ಮೈತ್ರಿಕೂಟದ ನಾಯಕರು ಭಾಗವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.