ನವದೆಹಲಿ : ಅಸೆಂಬ್ಲಿ ಚುನಾವಣೆಯಿಂದಾಗಿ ಚಳಿಗಾಲದಲ್ಲೂ ದೆಹಲಿ ರಾಜಕೀಯ ಬಿಸಿಯೇರಿದ್ದು ಇಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6:30 ಗಂಟೆವರೆಗೂ ಮತದಾನ ನಡೆಯಲಿದ್ದು 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷಿಸಿಕೊಳ್ತಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.
ಆಯೋಗದ ಪಾವಿತ್ರ್ಯತೆಗೆ ಮಸಿ ಬಳಿಯಲು ಕೇಜ್ರಿವಾಲ್ ಸುಳ್ಳು ಆರೋಪ ಮಾಡ್ತಿದ್ದಾರೆ. ಆಯೋಗವನ್ನು ಒಬ್ಬರು ನಡೆಸುತ್ತಿಲ್ಲ. ಇದು ಮೂವರು ಸದಸ್ಯರು ಇರುವ ಆಯೋಗ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.