ಬೆಂಗಳೂರು : ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ.

ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದ್ದು, ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಯಾರಿಗೆ ಅನ್ವಯವಾಗಲಿದೆ ವಿದ್ಯುತ್ ದರ ಹೆಚ್ಚಳ? – ವಿದ್ಯುತ್ ದರ ಹೆಚ್ಚಳ ಸಂಬಂಧಿಸಿದಂತೆ ಮಾತನಾಡಿದ ಸಚಿವ ಶರಣಪ್ರಕಾಶ್‌ ಪಾಟೀಲ, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದರು.

ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *