ಮುಂಬೈ : ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ಯಾರಿಸ್‌ಗೆ ಹೋಗುವ ಮಾರ್ಗಮಧ್ಯೆ ಅವರ ವಿಮಾನದ ಮೇಲೆ ಉಗ್ರ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ.
ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು, ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆಗೆ ಆಗಮಿಸಿ, ಬಂದರು ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿ ಡಿ ಸಾವರ್ಕರ್ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು.