ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿದರು. ನಂತರ ಎಂಎಲ್‌ಸಿ ಸಿ.ಟಿ. ರವಿ, ಆರ್‌ಎಸ್‌ಎಸ್ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರು ಮೆರವಣಿಗೆಗೆ ಚಾಲನೆ ನೀಡಿದರು.
ವಿವಿಧ ಕಲಾತಂಡಗಳ ಪ್ರದರ್ಶ ನದೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು. ಪಂಚವಾದ್ಯ, ರಾಮ್‌ಡೋಲು-ತಾಷಾ, ಝಾಂಜ್ ಹಾಗೂ ಡಿಜೆ ಮೇಳಗಳು ಮೆರವಣಿಗೆಗೆ ಮೆರಗು ತಂದವು. ರಸ್ತೆಯುದ್ದಕ್ಕೂ ಭಗವಾಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ನೆರೆದವರು ಗಣೇಶ, ಹನುಮಾನ್ ಹಾಗೂ ಶ್ರೀರಾಮನಿಗೆ ಜೈಕಾರ ಮೊಳಗಿಸಿದರು. ಗಣಪತಿ ಬಪ್ಪಾ ಮೋರಯಾ..ಎಂದು ಕೇಕೆ ಹಾಕಿದರಲ್ಲೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಮೆರವಣಿಗೆಯು ಚನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾ ಗಾಜಿನ ಮನೆಯವರೆಗೆ ಸಾಗಿತು. ನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಇದಕ್ಕೂ ಮೊದಲು ಕೆಲ ಹೊತ್ತು ಮಳೆ ಬಂದಿದ್ದರಿಂದ ಮೆರವಣಿಗೆ ಬೇಗ ಸಾಗಿ ಬಾವಿ ತಲುಪಿತು.
ರಾಣಿ ಚನ್ನಮ್ಮ ಶ್ರೀ ಗಜಾನನ ಉತ್ಸವ ಮಹಾಮಂಡಳದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ವಿ.ಎಸ್.ವಿ. ಪ್ರಸಾದ, ಮಹಾಮಂಡಳ ಅಧ್ಯಕ್ಷ ಸಂಜೀವ ಬಡಸ್ಕರ್, ಎಂಎಲ್‌ಸಿ ಪ್ರದೀಪ ಶೆಟ್ಟರ್, ಮೇಯರ್ ರಾಮಣ್ಣ ಬಡಿಗೇರ, ಜಮಾದಾರ, ಹಿಂದುಪರ ಸಂಘಟನೆಗಳ ಹಾಗೂ ಬಿಜೆಪಿ ಕಾರ್ಯಕರ್ತರು, ಭಕ್ತರು ಇದ್ದರು. ಸಮಿತ ಅಧ್ಯಕ್ಷ ಡಾ.ಎ.ಎಸ್.ಎ. ಪ್ರಸಾದ, ಮಹಾಮಂಡಳ ಅಧ್ಯಕ್ಷ ಸಂಜೀವ ಬಡಸ್ಕರ್, ಎಂಎಲ್‌ಸಿ ಪ್ರದೀಪ ಶೆಟ್ಟರ್, ಮೇಯರ್ ರಾಮಣ್ಣ ಬಡಿಗೇರ, ಮಾಜಿ ಶಾಸಕ ಅಶೋಕ ಕಾಟವೆ, ಹಿಂದುಪರ ಸಂಘಟನೆಗಳ ಹಾಗೂ ಬಿಜೆಪಿ ಕಾರ್ಯಕರ್ತರು ಮುಂತಾದವರು ಇದ್ದರು.