ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ, ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು,
ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಇನ್ನೂ ಲಾಲ್ ಬಾಗ್ ಫ್ಲವರ್ ಶೋಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಿನ್ನೆ ಮಧ್ಯಾಹ್ನದಿಂದ ಸಂಜೆಯವರೆಗೆ 33 ಸಾವಿರ 500 ವೀಕ್ಷಣೆ ಮಾಡಿದ್ದಾರೆ. 216 ನೇ ಲಾಲ್ ಬಾಗ್ ಫ್ಲವರ್ ಶೋಗೆ ಮೊದಲ ದಿನವೇ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು.
ಮುಂದಿನ ಮೂರು ದಿನ 3 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ ಎಂದು .ತೋಟಗಾರಿಕೆ ಇಲಾಖೆಯಿಂದ ಮಾಹಿತಿ ಲಭ್ಯ ವಾಗಿದೆ.