ಚಾಮರಾಜಪೇಟೆ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ.
ಏನಿದು ಪ್ರಕರಣ? – ಬೀದಿಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಈ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ವಿನಾಯಕ ನಗರದಲ್ಲಿ ತಡರಾತ್ರಿ ಕರ್ಣ ಎಂಬುವರಿಗೆ ಸೇರಿದ್ದ 3 ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದರು. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು ತನಿಖೆ ಆರಂಭಿಸಿದ್ದರು.
ಈ ಪ್ರಕರಣದಲ್ಲೂ ರಾಜಕೀಯ ಕೆಸರೆರಚಾಟಕ್ಕೆ ಶುರುವಾಗಿದೆ. ಘಟನೆ ಬೆಳಕಿಗೆ ಬರ್ತಿದ್ದಂತೆ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ಕೊಟ್ರು.. ಸ್ಥಳೀಯ ಸಂಸದ ಪಿಸಿ ಮೋಹನ್ ಸ್ಥಳ ಪರಿಶೀಲಿಸಿ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ವಿಪಕ್ಷ ನಾಯಕ ಅಶೋಕ್ ಕೂಡ ಸ್ಥಳಕ್ಕಾಗಮಿಸಿ, ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಇದು ಜಿಹಾದಿ ಮನಸ್ಥಿತಿ, ಹಾಲು ಕೊಡುವ ಕೆಚ್ಚಲು ಕೊಯ್ದಿದ್ದಾರೆ ಎಂದು ಕಿಡಿಕಾರಿದರು.