ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿನ್ನೆ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು ಎಂದು ಮಾಹಿತಿ ವರದಿಯಾಗಿದೆ.
ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.
ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.