ಬೆಂಗಳೂರು : ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳು ಆಕೆಯ ಬಳಿ ಇದ್ದ ಮೊಬೈಲ್, ಹಣ, ತಾಳಿ, ಚಿನ್ನ ಕದ್ದು ಪರಿಯಾಗಿದ್ದರು. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಸೆಂಟ್ರಲ್ ಮಹಿಳಾ ಠಾಣೆಯ ಪೊಲೀಸರು ಬಂಧಿಸಿ, ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಣೇಶ್, ಶರವಣ ಬಂಧಿತ ಆರೋಪಿಗಳು ಎಂದು ಗುರುತಿಸಿಲಾಗಿದೆ. ಕೆ.ಆರ್‌ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಏನಿದು ಪ್ರಕರಣ? – ಕಳೆದ ಭಾನುವಾರ ರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲು ಕೆ.ಆರ್ ಮಾರ್ಕೆಟ್ ಬಳಿ ಬಸ್ ಗಾಗಿ ಕಾಯುತ್ತಿರುವಾಗ ಘಟನೆ ನಡೆದಿದೆ.

ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತೆ ಅಂತಾ ದುಷ್ಕರ್ಮಿಗಳನ್ನ ವಿಚಾರಿಸಿದ್ದಾರೆ. ಬಸ್ ಬರುವ ಜಾಗ ತೋರಿಸತ್ತೇವೆ ಅಂತಾ ಬಸ್ ನಿಲ್ದಾಣದ ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರ ಮಾಡಿ ಮಹಿಳೆಯ ಮೇಲಿದ್ದ ಆಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ, ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ಕಾಮುಕರಿಗೆ ಹೆಡೆಮುರಿ ಕಟ್ಟಲು ಬಲೆ ಬೀಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *