ನವದೆಹಲಿ : ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಪುತ್ರ ಜೀತ್ ಅದಾನಿ ಮದುವೆಗೆ ಸಜ್ಜಾಗಿದ್ದಾರೆ. ತಮ್ಮ ವಿವಾಹದ ಗೌರವಾರ್ಥ, ಪ್ರತಿ ವರ್ಷ 500 ಅಂಗವಿಕಲ ಮಹಿಳೆಯರಿಗೆ ಮದುವೆಗೆ ತಲಾ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಜೀತ್ ಅದಾನಿ ಅವರು ಫೆ.7 ರಂದು ಜೈಮಿನ್ ಶಾ ಅವರನ್ನು ವಿವಾಹವಾಗಲಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಗೌತಮ್ ಅದಾನಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಜೀತ್ ಮತ್ತು ದಿವಾ ತಮ್ಮ ದಾಂಪತ್ಯ ಜೀವನವನ್ನು ಒಂದು ಉದಾತ್ತ ಪ್ರತಿಜ್ಞೆಯೊಂದಿಗೆ ಪ್ರಾರಂಭಿಸಲು ನಿರ್ಧರಿಸಿದ್ದಾರೆ. ಪ್ರತಿ ವರ್ಷ 500 ದಿವ್ಯಾಂಗ ಸಹೋದರಿಯರ ಮದುವೆಗೆ 10 ಲಕ್ಷ ರೂ.ಗಳನ್ನು ದೇಣಿಗೆ ನೀಡುವ ‘ಮಂಗಲ ಸೇವಾ’ ಪ್ರತಿಜ್ಞೆಯನ್ನು ಅವರು ತೆಗೆದುಕೊಂಡಿದ್ದಾರೆ.
ಒಬ್ಬ ತಂದೆಯಾಗಿ, ಈ ಪ್ರತಿಜ್ಞೆ ನನಗೆ ಅಪಾರ ತೃಪ್ತಿಯನ್ನು ನೀಡುತ್ತದೆ. ಇದರಿಂದ ಅನೇಕ ದಿವ್ಯಾಂಗ ಹೆಣ್ಣುಮಕ್ಕಳು ಮತ್ತು ಅವರ ಕುಟುಂಬಗಳು ಸಂತೋಷ ಮತ್ತು ಘನತೆಯಿಂದ ಬದುಕಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಅದಾನಿ ಪೋಸ್ಟ್ ಹಂಚಿಕೊಂಡಿದ್ದಾರೆ.