ಬೆಂಗಳೂರು : ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಡಿ.ಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ.

ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.

ಆರೋಪಿ ಸ್ಥಾನದಲ್ಲಿರುವ ಐಶ್ವರ್ಯಗೌಡ ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ.

Leave a Reply

Your email address will not be published. Required fields are marked *