ಕೊಪ್ಪಳ : ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ನಾಡಿನ ಜನತೆ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಆದರೆ ಈ ಹಣ ಎಲ್ಲಿ ಹೋಗುತ್ತಿದೆ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರವನ್ನ ಪ್ರಶ್ನಿಸಿದ್ದಾರೆ.
ಕೊಪ್ಪಳದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್‌ಡಿಕೆ, ಪ್ರತಿನಿತ್ಯ ಗ್ಯಾರಂಟಿ ಭಜನೆ ಮಾಡೋದು, ಕೇಂದ್ರ ಸರ್ಕಾರವನ್ನ ದೂಷಣೆ ಮಾಡೋದು ಬಿಟ್ಟು ಬೇರೆ ಏನನ್ನೂ ಈ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಕೆಆರ್‌ಡಿಬಿಗೆ 5,000 ಕೋಟಿ ರೂ. ಕೊಡ್ತೇವೆ ಅಂತ ಹೇಳಿದ್ರು. ಈವರೆಗೆ ನಯಾಪೈಸೆ ಬಿಡುಗಡೆ ಆಗಿಲ್ಲ.
ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ನಾಡಿನ ಜನತೆ ಸರ್ಕಾಕದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಆದ್ರೆ ಈ ಹಣ ಎಲ್ಲಿ ಹೋಗುತ್ತಿದೆ? ನಾಡಿನ ಸಂಪತ್ತನ್ನು ವಾಮಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ. ರಾಜ್ಯದ ಜನ ಅವರ ಪಕ್ಷಕ್ಕೆ 138 ಸ್ಥಾನ ಕೊಟ್ಟಿದ್ದಾರೆ. ನಟ್ಟು ಬೋಲ್ಟ್ ಸರಿಮಾಡಲು ಅಧಿಕಾರ ಕೊಟ್ಟಿದ್ದಾರಾ? ಆ ಕೆಲಸ ಮಾಡಲು ಬೇರೆಯವರು ಇದ್ದಾರೆ. ರಾಜ್ಯದಲ್ಲಿ ಅನೇಕ ಬೆಳವಣಿಗೆ ನಡೆಯುತ್ತಿವೆ. ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೇ ಇವರ ಬಗ್ಗೆ ಅವರು, ಅವರ ಬಗ್ಗೆ ಇವರು ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.