ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣಮಂಟಪದಿಂದ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ದ ಆಕ್ರೋಶ ಹೊರಹಾಕಿದ್ದಲ್ಲದೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾವ ಚಿತ್ರಕ್ಕೆ ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ರು.
ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಬಾಯಿ ಬಡಿದುಕೊಂಡು ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸಚಿವರಾದ ವಿ ಮುನಿಯಪ್ಪ, ಎಂ.ಆರ್.ಸೀತಾರಾಂ ಸೇರಿದಂತೆ ಶಾಸಕ ಪುಟ್ಟಸ್ವಾಮಿಗೌಡ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರದಾನಕಾರ್ಯದರ್ಶಿ ರಕ್ಷರಾಮಯ್ಯ ಭಾಗವಹಿಸಿದ್ರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಎಂ ಸಿ ಸುಧಾಕರ್ ರಾಜ್ಯಪಾಲರು ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶದ ನುಡಿಗಳನ್ನಾಡಿದರು.