ಕಾರವಾರ: ಹರ ಘರ ತಿರಂಗಾ ಅಭಿಯಾನ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಭಾರತೀಯ ಜನತಾ ಪಕ್ಷ ನೆನ್ನೆ(ಆ.12) ಕುಮಟಾ ನಗರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಹಾಗೂ ಕುಮಟಾ ಹೊನ್ನಾವರ ಶಾಸಕ ದಿನಕರ್ ಶೆಟ್ಟಿ ಚಾಲನೆ ನೀಡಿದರು.
ನಂತರ ಮಾತನಾಡಿದ ಕುಮಟಾ ಶಾಸಕ ದಿನಕರ ಶೆಟ್ಟಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 10 ವರ್ಷದ ಹಿಂದೆ ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದಂತೆ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.ದಿನಾಂಕ 12 ರಿಂದ 15ನೇ ತಾರೀಖಿನವರೆಗೆ ಎಲ್ಲರ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೆರವಣಿಗೆಯಲ್ಲಿ ಭಾರತೀಯ ಜನತಾ ಪಕ್ಷದ ನೂರಾರು ಕಾರ್ಯಕರ್ತರು ಪುರಸಭಾ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಯುವ ಯುವ ಮೋರ್ಚಾ ಸದಸ್ಯರು ಭಾಗವಹಿಸಿದ್ದರು.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.