ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿ ಪರಾರಿಯಾದ ಹೊರರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ಹುಡುಕಾಟ ತೀವ್ರಗೊಂಡಿದೆ.
ಪಂಜಾಬ್ ಅಥವಾ ಹರಿಯಾದ ಕ್ಯಾಂಟರ್ ಎನ್ನುವ ಪ್ರಾಥಮಿಕ ಮಾಹಿತಿ ಬೆಳಗಾವಿ ಪೊಲೀಸರಿಗೆ ಸಿಕ್ಕಿದೆ. ಪೊಲೀಸರು 60 ಕ್ಯಾಂಟರ್ ವಾಹನಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದು. ಹಿರೇಬಾಗೇವಾಡಿ ಟೋಲ್‌ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ವಿಡಿಯೋ ಆಧಾರಿಸಿ ಪೊಲೀಸರು ಈಗಾಗಲೇ 30 ಕ್ಯಾಂಟರ್ ವಾಹನಗಳನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.
ಆ ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ಪ್ರತಿ ಕ್ಯಾಂಟರ್ ಮೇಲೆ ನಿಗಾ ವಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ಅವರು ತಿಳಿಸಿದ್ದಾರೆ.