ಪ್ರಯಾಗರಾಜ್‌ : ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭ ಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ.

ಕುಂಭಮೇಳ ಇದು ಪ್ರತಿ 3 ವರ್ಷಗಳಿಗೊಮ್ಮೆ ನಡೆಯುವ ಒಂದು ರೀತಿಯ ಜಾತ್ರೆಯಾಗಿದೆ. ಇದನ್ನು ಕುಂಭ ಎಂದು ಕರೆಯಲಾಗುತ್ತದೆ. ಹರಿದ್ವಾರ ಮತ್ತು ಪ್ರಯಾಗ್ರಾಜ್‌ನಲ್ಲಿ ಪ್ರತಿ 6 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಅರ್ಧ ಕುಂಭ ಎಂದು ಕರೆಯಲಾಗುತ್ತದೆ. ಪ್ರಯಾಗರಾಜ್‌ಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಪೂರ್ಣ ಕುಂಭಮೇಳ ಎಂದು ಕರೆಯಲಾಗುತ್ತದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಮಹಾಕುಂಭಮೇಳ ಎಂದು ಕರೆಯಲಾಗುತ್ತದೆ.

ಈ ಬಾರಿ ಪ್ರಯಾಗರಾಜ್‌ದಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ. ಸದ್ಯ ಮಹಾಕುಂಭ ಮೇಳಕ್ಕೆ ದೇಶವೇ ಭರದಿಂದ ಸಂಭ್ರಮದಿಂದ ಸಜ್ಜಾಗುತ್ತಿದೆ. 12 ವರ್ಷಗಳ ನಂತರ ಬರುವ ಮಹಾಕುಂಭ ಮೇಳ ಇದಾಗಿದ್ದು, ನಡೆಯಲಿರುವ ಮಹಾ ಕುಂಭಮೇಳಕ್ಕೆ 40-45 ಕೋಟಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಈ ಮಹಾಕುಂಭ ಮೇಳ ಕೇವಲ ಉತ್ಸವ ಮಾತ್ರವಲ್ಲ ಸಾವಿರಾರು ವರ್ಷಗಳ ಐತಿಹ್ಯ, ಪುರಾತನ ಇತಿಹಾಸ ಹೊಂದಿರುವ ಉತ್ಸಾಹಭರಿತ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ. ಈ ಉತ್ಸವವು ಪ್ರಾಚೀನ ಹಿಂದೂ ಪುರಾಣ ಮತ್ತು ಭಾರತದ ಶ್ರೀಮಂತ ಧಾರ್ಮಿಕ ಪರಂಪರೆಯ ಸಾಕ್ಷಿಯಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *