ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಭಾನುವಾರ ಸಭೆ ನಡೆಸಿದರು.
ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಕಮಿಷನರ್ ಮುನಿಶ್ ಮೌದ್ಗೀಲ್, ಬಿಎಂಆರ್ಡಿಎ ಕಮಿಷನರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಪಾಲ್ಗೊಂಡಿದ್ದರು.