ಬೆಂಗಳೂರು : ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜ.15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರು ಜ.14 ಮತ್ತು ಜ.15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಡಿಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕೇವಲ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅಷ್ಟೇ ಅಲ್ಲದೆ, ಪರಮೇಶ್ವರ, ಸಿಎಂ ಆಪ್ತ ಸಚಿವರು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇಂದಿರಾ ಗಾಂಧಿ ಭವನ ಉದ್ಘಾಟನೆ ಕಾರ್ಯಕ್ರಮವು ದೆಹಲಿಯ ಕೋಟ್ಲಾ ರಸ್ತೆಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಹಿಸಲಿಕೊಳ್ಳಲಿದ್ದಾರೆ.

ಈ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂಸದರು ಮತ್ತು ಪ್ರಮುಖ ಕಾಂಗ್ರೆಸ್ ವ್ಯಕ್ತಿಗಳು ಸೇರಿದಂತೆ ದೇಶಾದ್ಯಂತದ ಸುಮಾರು 400 ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಚಟುವಟಿಕೆಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪಕ್ಷದ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸಲು ‘ಇಂದಿರಾ ಗಾಂಧಿ ಭವನ’ವನ್ನು ವಿನ್ಯಾಸಗೊಳಿಸಲಾಗಿದೆ.

Leave a Reply

Your email address will not be published. Required fields are marked *