ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚುವುದರಲ್ಲಿ ಕರ್ನಾಟಕಕ್ಕೆ ನ್ಯಾಯವಾದ ಪಾಲು ನೀಡುತ್ತಿಲ್ಲ. ರಾಜಕೀಯ ಕಾರಣಗಳಿಗಾಗಿ ಅನುದಾನವನ್ನು ಕಡಿತಗೊಳಿಸುವುದು ಸರಿಯಲ್ಲ. ಅನುದಾನ ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರಕಾರ ಇದನ್ನು ಸರಿಪಡಿಸಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ನಂತರ ಬೈರೇಗೌಡ ಅವರು ಕರ್ನಾಟಕಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು. ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ.

ನಮ್ಮ ಪಾಲಿನ ಹಣವನ್ನೇಕೆ ನೀಡಲಾಗುತ್ತಿಲ್ಲ? ರಾಜ್ಯಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ನಾವು ಮಾಡಿದ ಕೆಲಸನ್ನು ಆಧರಿಸಿ, ಯಾವುದೇ ವಿಳಂಬ ಮಾಡದೆ ಕಂದ್ರ ಸರ್ಕಾರ ನಮಗೆ ನ್ಯಾಯಯುತ ಅನುದಾನ ನೀಡುಬೇಕೆಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಕೇಂದ್ರ ಸರ್ಕಾರ ಯಾವುದೇ ವಿಳಂಬವಿಲ್ಲದೆ ಹಣ ನೀಡಲಿದೆ. ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ವಿ, ಅನುದಾನವನ್ನೂ ಕೊಟ್ಟಿದ್ವಿ. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ. ಇದಕ್ಕಾಗಿ ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ‌ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ಇಂದು ಅಡಿಕೆ ಬೆಳಗಾರರ ಸಮಸ್ಯೆಗಳ ಪರಿಹಾರಕ್ಕೆ ಅನುದಾನ ಕೋರಲಾಗಿದೆ. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ 97 ಕೋಟಿ ರೂ ಬಿಡುಗಡೆ ಮಾಡುತ್ತಿದ್ದೇವೆ. ಮೂರೂ ಸಚಿವರೂ ಒಂದಷ್ಟು ಬೇಡಿಕೆ ಕೊಟ್ಟಿದ್ದಾರೆ, ಅದನ್ನೂ ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ತಿಳಿಸಿದರು.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು, ಈ ಪಕ್ಷಪಾತವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಕೇಂದ್ರದ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರದ ಬಿಜೆಪಿ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

Leave a Reply

Your email address will not be published. Required fields are marked *