ಹೊಸಪೇಟೆ : ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಗಮನಾರ್ಹವಾಗಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆಯು ಮೊದಲ ಹಂತದಲ್ಲಿಯೇ ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಗೊಂಡು, (ಆ.16) ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಗಿದೆ.

ಒಟ್ಟಾರೆಯಾಗಿ ಐದು ಪ್ಲೇಟ್ ಗಳನ್ನು ಅಳವಡಿಕೆ ಮಾಡಲಿದ್ದು (ಆ17) ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳ್ಳುತ್ತದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.

ಇನ್ನೂ ಸ್ಟಾಪ್ ಗೇಟ್ ಅಳವಡಿಕೆಯ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕರೆ ಮಾಡುವ ಮೂಲಕ ಮಾಹಿತಿ ತಲುಪಿಸಿದ್ದಾರೆ.

ಸ್ಟಾಪ್ ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ವೈಕುಂಠ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಜಮೀರ್ ಅಹಮದ್ ಖಾನ್ ದಿನಕ್ಕೆ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದರು.

ತಾಂತ್ರಿಕ ತಂಡದ ನಿರಂತರ ಪರಿಶ್ರಮ ದಿಂದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ಸು ಸಾಧಿಸಿದ್ದು ಇಡೀ ತಂಡಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು ಆನಂತರ ಸಚಿವ ಶಿವರಾಜ್ ತಂಗಡಗಿ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *