ಮೈಸೂರು : ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ ಕೊಡಿಸಬೇಕಾಗಿದ್ದ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರು, ಮಗನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿ ಭವ್ಯ ಅವರನ್ನು ರಕ್ಷಣೆ ಮಾಡಲು ಸಹಕರಿಸಿ, ಸೊಸೆ ಮತ್ತು ಮೊಮ್ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಈ ಮೂಲಕ ಸುಳ್ಳು ಡೆತ್ ನೋಟ್ ಸೃಷ್ಟಿಸಿಕೊಂಡು ಮಗನ ಆಸ್ತಿ ಕಬಳಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಅನ್ಯಾಯದ ಬಗ್ಗೆ ನೇಹಾ ಅವರು ಮಾತನಾಡದಂತೆ ತಡೆದಿರುವುದನ್ನು ಗಮನಿಸಿದರೆ, ರಾಜಕೀಯವಾಗಿ ಶಿವಮೂರ್ತಿ ಮತ್ತು ಪೊಲೀಸ್ ಅಧಿಕಾರಿಯಾಗಿ ಭವ್ಯರವರು ಎಷ್ಟು ಪ್ರಭಾವಿಗಳು ಎಂಬುದು ಗೊತ್ತಾಗುತ್ತದೆ. ಏನೇ ಆದರೂ ನೇಹಾ ಮತ್ತು ಅವರ ಮಕ್ಕಳಿಗೆ ನ್ಯಾಯ ಕೊಡಿಸಲು ಸಿದ್ಧನಿದ್ದೇನೆ. ಮೈಸೂರು ಪೊಲೀಸ್ ಆಯುಕ್ತರು ಪ್ರಕರಣವನ್ನು ಪುನರಾರಂಭಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸತ್ಯಕ್ಕೆ ಜಯ ಸಿಗಬೇಕು. ನೇಹಾ ಮತ್ತು ಅವರ ಮಕ್ಕಳಿಗೆ ನ್ಯಾಯದ ಅಗತ್ಯವಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *