ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೂನ್ 20 ರಂದು ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಕ್ಯಾಸಲ್ ರಾಕ್, ಸಿದ್ದಾಪುರ, ಕದ್ರಾ, ಕೊಲ್ಲೂರಿನಲ್ಲಿ ಮಳೆಯಾಗಿದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಸಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ
ಭಾರೀ ಸಂಚಲನವನ್ನುಂಟು ಮಾಡಿದ್ದ ಬಿಪೋರ್ಜಾಯ್ ಚಂಡಮಾರುತ ಸದ್ಯ ತನ್ನ ಉಗ್ರರೂಪವನ್ನು ನಿಧಾನವಾಗಿ ಕಡಿಮೆ ಮಾಡುತ್ತಿದೆ. ಗುಜರಾತ್ನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದ್ದ ಚಂಡಮಾರುತ ಸದ್ಯ ಪಾಕಿಸ್ತಾನದತ್ತ ಸಾಗುತ್ತಿದ್ದು, ನಂತರ ಪುನಃ ಭಾರತದತ್ತ ವ್ಯಾಪಿಸುವ ಸಾಧ್ಯತೆ ಇದೆ.
ಚಂಡಮಾರುತ ಗುಜರಾತ್ನಲ್ಲಿ ಭಾರೀ ಅನಾಹುತ ಸೃಷ್ಟಿಸಿದ್ದು, ಸುಮಾರು 940 ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ನೂರಾರು ಮರಗಳು ಧರೆಗುರುಳಿವೆ. ಚಂಡಮಾರುತವು ಗಂಟೆಗೆ 108 ಕಿಮೀ ವೇಗದಲ್ಲಿ ಅರಬ್ಬಿ ಸಮುದ್ರದಿಂದ ಜಖೌ ಬಂದರಿನ ಬಳಿ ಭೂಕುಸಿತ ಉಂಟು ಮಾಡಿದೆ. ಚಂಡಮಾರುತದ ಬೀಸಿದ ನಂತರ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯೂ ಆಗಿದೆ