Kiccha 46 Teaser: ಸುದೀಪ್ ಅವರ ಹೊಸ ಸಿನಿಮಾದ ಟೀಸರ್ ರಿಲೀಸ್ ದಿನಾಂಕವನ್ನು ಬಹಿರಂಗ ಮಾಡಲಾಗಿದೆ. ಜುಲೈ 2ರಂದು ಬೆಳಗ್ಗೆ 11.46ಕ್ಕೆ ‘ಕಿಚ್ಚ 46’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.
ನಟ ಕಿಚ್ಚ ಸುದೀಪ್ (Kichcha Sudeep) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ 46ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್ ಕೌತುಕ ಇದೆ. ಈ ಸಿನಿಮಾದ ಕೆಲಸಗಳು ಈಗ ಭರದಿಂದ ಸಾಗಿವೆ. ‘ವಿಕ್ರಾಂತ್ ರೋಣ’ ಬಿಡುಗಡೆ ಆದ ಬಳಿಕ ಅವರು ದೀರ್ಘ ಗ್ಯಾಪ್ ಪಡೆದುಕೊಂಡಿದ್ದರು. ನಂತರ ಕ್ರಿಕೆಟ್ ಕಡೆಗೆ ಗಮನ ನೀಡಿದ್ದರು. ಬಹಳ ದಿನಗಳ ಬಳಿಕ ಅವರು 46ನೇ ಸಿನಿಮಾದ (Kiccha 46) ಕೆಲಸಗಳಿಗೆ ಚಾಲನೆ ನೀಡಿದರು. ಈಗ ಈ ಸಿನಿಮಾ ತಂಡದಿಂದ ಹೊಸ ಅಪ್ಡೇಟ್ ನೀಡಲಾಗಿದೆ. ಈ ಸಿನಿಮಾದ ಟೀಸರ್ ರಿಲೀಸ್ ದಿನಾಂಕವನ್ನು ಬಹಿರಂಗ ಮಾಡಲಾಗಿದೆ. ಜುಲೈ 2ರಂದು ಬೆಳಗ್ಗೆ 11.46ಕ್ಕೆ ‘ಕಿಚ್ಚ 46’ ಚಿತ್ರದ ಟೀಸರ್ (Kiccha 46 Teaser) ಬಿಡುಗಡೆ ಆಗಲಿದೆ.
ಈಗಾಗಲೇ ತಿಳಿದಿರುವಂತೆ ಕಿಚ್ಚ ಸುದೀಪ್ ಅವರು ಮೂರು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆ ಪೈಕಿ ‘ವಿ ಕ್ರಿಯೇಷನ್ಸ್’ನ ಕಲೈಪುಲಿ ಎಸ್. ಧಾನು ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾ ಮೊದಲು ಸೆಟ್ಟೇರಿದೆ. ಕೆಲವೇ ದಿನಗಳ ಹಿಂದೆ ಅವರು ಪ್ರೋಮೋ ಶೂಟಿಂಗ್ನಲ್ಲಿ ಭಾಗಿ ಆಗಿದ್ದರು.
ಕಾಲಿವುಡ್ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ವಿ ಕ್ರಿಯೇಷನ್ಸ್’ ಜೊತೆ ಕಿಚ್ಚ ಸುದೀಪ್ ಅವರು ಕೈ ಜೋಡಿಸಿದ್ದು, ಅದ್ದೂರಿ ಬಜೆಟ್ನಲ್ಲಿ ‘ಕಿಚ್ಚ 46’ ಚಿತ್ರ ನಿರ್ಮಾಣ ಆಗುತ್ತಿದೆ. ‘ಕಬಾಲಿ’, ‘ತುಪಾಕಿ’, ‘ಅಸುರನ್’ ಮುಂತಾದ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಕಲೈಪುಲಿ ಎಸ್. ಧಾನು ಅವರಿಗೆ ಇದೆ.