ತುಮಕೂರು : 50 ವರ್ಷದ ಬಳಿಕ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ನಡೆದ ಮಧುಗಿರಿಯ ಚೋಳೇನಹಳ್ಳಿ ಕೆರೆಯಲ್ಲಿ ಸಚಿವ ಕೆಎನ್ ರಾಜಣ್ಣ ಬೋಟಿಂಗ್‌ನಲ್ಲಿ ಜಾಲಿ ರೈಡ್ ಮಾಡಿದ್ದಾರೆ. ಕೆರೆ ಪ್ರವಾಸಿ ತಾಣವಾಗಿ ಮಾರ್ಪಡಿಸುವ ಹಿನ್ನೆಲೆಯಲ್ಲಿ ಬೋಟಿಂಗ್‌ಗೆ ರಾಜಣ್ಣ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಚೋಳೇನಹಳ್ಳಿ ಕೆರೆಯಲ್ಲಿ ನೀರು ಕಡಿಮೆಯಾದಾಗ ಕೆರೆ ಏರಿ ಹಾಗೂ ಹೂಳನ್ನು ಎತ್ತಿಸಲಾಗುವುದು. ಈ ಕೆರೆ ನೋಡಲು ಸುಂದರವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆಯಲ್ಲಿ ಶಾಶ್ವತವಾಗಿ ದೋಣಿ ವಿಹಾರದ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದರು.
ಚೋಳೇನಹಳ್ಳಿ ಕೆರೆ ತುಂಬಿದ ಪ್ರತಿ ವರ್ಷದಲ್ಲಿ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಆಚರಿಸಲಾಗುವುದು. ಅದಕ್ಕಾಗಿ ಕೆರೆಯೊಳಗೆ ಶಾಶ್ವತವಾಗಿ ವೇದಿಕೆಗಳನ್ನು ನಿರ್ಮಿಸಲಾಗುವುದು ಎಂದರು.