ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿ ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೈಯಲ್ಲಿ ಡೆತ್‌ನೋಟ್ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಎಸ್‌ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ಡೆತ್‌ನೋಟ್‌ನಲ್ಲಿ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಕೆಲಸದ ಸಂಬಂಧ ಒತ್ತಡ ಹಾಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.