ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಲಾರಿ ಹರಿದಿರುವ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಬಳಿಯಲ್ಲಿ ನಡೆದಿದೆ.
ವೇಗವಾಗಿ ಬಂದ ಲಾರಿಯು ಕುರಿಗಳ ಮೇಲೆ ಹರಿದಿದ್ದು, ಲಾರಿಯ ಗಾಲಿಗೆ ಸಿಕ್ಕಿಕೊಂಡು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುರಿಗಳು ಮುಧೋಳ ಮೂಲದ ಕುರಿಗಳು ಎಂದು ಅಂದಾಜಿಸಲಾಗಿದ್ದು, ಖಚಿತ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇನ್ನೂ ಸುಮಾರು ಕುರಿಗಳು ಸಾವನ್ನಪ್ಪಿದ್ದು, ರಸ್ತೆಯಲ್ಲಿ ನೆತ್ತರಿನ ಕೋಡಿಯೇ ಹರಿದಿದೆ. ಅಲ್ಲದೇ ಲಾರಿಯನ್ನು ವಶಕ್ಕೆ ಪಡೆದಿರುವ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.