ಹುಬ್ಬಳ್ಳಿ: ಈ ಬಾರಿಯೂ ಕೂಡ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಮನವಿಗಳು ಬರುತ್ತಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಹಾಗೂ ಸಭೆಯೊಂದಿಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.

ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಪ್ಲೈಓವರ್ ಕಾಮಗಾರಿಗೆ ಈದ್ಗಾ ಮೈದಾನದ ಕಂಪೌಂಡ್ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಗಣಪತಿ ಪ್ರತಿಷ್ಠಾಪನೆಗೆ ಮನವಿಗಳು ಬರುತ್ತಿವೆ.‌ ಕಾನೂನಾತ್ಮಕ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಲ್ಲದೇ ಈ ಹಿಂದೆ ಕೂಡ ಸರ್ವೋಚ್ಚ ನ್ಯಾಯಾಲಯ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಕ್ರಮಗಳನ್ನು ಜರುಗಿಸಿದ್ದೇವೆ ಈ ಬಾರಿಯೂ ಪರಿಶೀಲನೆ ನಡೆಸಿ ಕ್ರಮಗಳನ್ನು ಜರುಗಿಸುತ್ತೇವೆ ಎಂದು ಅವರು ಹೇಳಿದರು.

ಇನ್ನೂ ಪ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ನ್ಯಾಷನಲ್ ಹೈವೇ ಅಥಾರಿಟಿ ನಮಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಭೂಸ್ವಾಧೀನ ಪ್ರಕ್ರಿಯೆಗೆ ಭೂಮಿಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದ್ದು, ಅದನ್ನು ಕೂಡ ಪರಿಶೀಲನೆ ನಡೆಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *