ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತ್ರಿವರ್ಣ ಧ್ವಜವನ್ನು ಹೊಂದಿರುವ ತಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸುವಂತೆ ನಾಗರಿಕರನ್ನು ಕೋರಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಶ್ರೀ ಮೋದಿಯವರು ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಆಂದೋಲನವನ್ನು ಸ್ಮರಣೀಯ ಜನಾಂದೋಲನವನ್ನಾಗಿಸಲು ಎಲ್ಲರೂ ಮಾಡಬೇಕೆಂದು ಅವರು ಒತ್ತಾಯಿಸಿದರು.
harghartiranga.com ನಲ್ಲಿ ತಿರಂಗಾದೊಂದಿಗೆ ಸೆಲ್ಸಿ ಹಂಚಿಕೊಳ್ಳುವಂತೆ ಶ್ರೀ ಮೋದಿ ಅವರು ಪ್ರತಿಯೊಬ್ಬರನ್ನು ಆಹ್ವಾನಿಸಿದ್ದಾರೆ .
ಪ್ರಧಾನಿಯವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಈ ರೀತಿಯಾಗಿ ಉಲ್ಲೇಖಿಸಿದ್ದಾರೆ ;
“ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆ, ಮತ್ತೊಮ್ಮೆ #HarGharTiranga ಅನ್ನು ಸ್ಮರಣೀಯ ಸಾಮೂಹಿಕ ಚಳುವಳಿಯನ್ನಾಗಿ ಮಾಡೋಣ. ನಮ್ಮ ದೇಶವನ್ನು ನಾವೆಲ್ಲ ಒಟ್ಟಾಗಿ ಸೇರಿ ಜನಾಂದೋಲನವನ್ನಾಗಿ ಮಾಡೋಣ. ನಾನು ನನ್ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಿದ್ದೇನೆ ಮತ್ತು ಅದೇ ರೀತಿ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜದೊಂದಿಗೆ ಹಾಗೂ ನನ್ನೊಂದಿಗೆ ಸೇರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ನಾನು ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ ಮತ್ತು , ಧ್ವಜದೊಂದಿಗೆ ನೀವು ತೆಗೆದುಕೊಂಡ ಸೆಲ್ಪಿಗಳನ್ನು , https://hargartiranga.com ನಲ್ಲಿ ಹಂಚಿಕೊಳ್ಳಿ” ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ಹರ್ಘರ್ ತಿರಂಗಅಭಿಯಾನವು ಎರಡು ವರ್ಷಗಳ ಹಿಂದೆ ಪ್ರಾರಂಭವಾದಾಗಿನಿಂದ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ. ಪ್ರಧಾನಮಂತ್ರಿಯವರು ಜುಲೈ 28 ರಂದು ತಮ್ಮ ಮನಸಿನ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರದಲ್ಲಿ ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಾಡಿದ್ದಾರೆ ಮತ್ತು ‘harghartiranga.com’ ವೆಬ್‌ಸೈಟ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಅಪ್‌ಲೋಡ್ ಮಾಡುವಂತೆ ಜನರನ್ನು ಕೋರಿದರು. ಈ ಅಭಿಯಾನ ಸಮಾಜದ ಎಲ್ಲ ವರ್ಗದವರನ್ನು ಸೆಳೆದಿದೆ ಎಂದರು.
2024 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿಯವರ ಕರೆಯನ್ನು ಅನುಸರಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸುತ್ತಿದೆ.
ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದ ಸ್ಮರಣಾರ್ಥ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ 2022 ರಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯವು ಹರ್ ಘರ್ ತಿರಂಗ ಅಭಿಯಾನವನ್ನು ಪ್ರಾರಂಭಿಸಿತು.ಹಾಗಾದ್ರೆ ಬನ್ನಿ ನಾವೆಲ್ಲ ಸೇರಿ ದೇಶ ಪ್ರೇಮವನ್ನು ಎತ್ತಿ ಹಿಡಿಯೋಣ..