Lokayukta raid In Karnataka: ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಸರ್ಕಾರರ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ (Lokayukta Raid). ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ(Lokayukta ) ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂ. ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್.ಪುರಂನಿಂದ ವರ್ಗಾವಣೆಯಾಗಿದ್ದ . ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.