ಲೋಕಾಯುಕ್ತ ದಾಳಿಯಲ್ಲಿ ಬೆಂಗಳೂರಿನ ಕೆಆರ್ ಪುರಂ ತಹಶಿಲ್ದಾರ್ ನಿವಾಸದಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ.
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು(ಜೂನ್ 28) ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ಸರ್ಕಾರಿ ಅಧಿಕಾರಿಗಳ ನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಬೆಂಗಳೂರಿನ ಕೆಆರ್ ಪುರಂ ತಹಶಿಲ್ದಾರ್ ಆಗಿರುವ ಅಜಿತ್ ಕುಮಾರ್ ರೈ ಮಾಲಾಡಿ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವರಾದ ಅಜಿತ್ ಕುಮಾರ್ ರೈ ಅವರ ಸಹಕಾರನಗರದಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ನಗದು ಹಣದ ಜೊತೆಗೆ ಚಿನ್ನಾಭರಣಗಳು ಸಹ ಪತ್ತೆಯಾಗಿದ್ದು. ಅವುಗಳನ್ನ ವಶ ಪಡೆದುಕೊಂಡು ಹಣದ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಅತ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಅಜಿತ್ ಕುಮಾರ್ ರೈ ಮನೆ ಮೇಲೂ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.