ನವದೆಹಲಿ : ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಜನವರಿ 20 ರಂದು ಭಾರತೀಯ ಕಾಲಮಾನ ರಾತ್ರಿ 10:30 ರ ವೇಳೆಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅಮೇರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅವರ 2 ನೇ ಅವಧಿಯ ಆಡಳಿತ ಯಶಸ್ವಿಯಾಗಲೆಂದು ಶುಭ ಹಾರೈಸಿ, ಅಭಿನಂದನೆ ಸಲ್ಲಿಸಿದ್ದಾರೆ.

“ನಮ್ಮ ಎರಡೂ ದೇಶಗಳಿಗೆ ಪ್ರಯೋಜನವನ್ನು ನೀಡಲು ಮತ್ತು ಜಗತ್ತಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಮತ್ತೊಮ್ಮೆ ನಿಕಟವಾಗಿ, ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿಲ್ಲ. ಆದರೆ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಮ್ಮ ವಿಶೇಷ ರಾಯಭಾರಿಯಾಗಿ ಕಾರ್ಯಕ್ರಮಕ್ಕೆ ಕಳುಹಿಸಿದ್ದಾರೆ.

“ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಅಮೆರಿಕದ 47 ನೇ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿದೇಶಾಂಗ ಸಚಿವರಾಗಿ ಮತ್ತು ಪ್ರಧಾನಿಯವರ ವಿಶೇಷ ರಾಯಭಾರಿಯಾಗಿ ಭಾರತವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿದೆ” ಎಂದು ಈ ಹಿಂದೆ ಹೇಳಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *